Nadiya Nenapina Hangu - Jogi ( Girish Rao )
ಕಾದಂಬರಿ ನದಿಯ ಹಾಗೆ!
ನದಿ ಹುತ್ತಿವುದು ಒಂದು ಸಣ್ಣ ಸೆಲೆಯಾಗಿ, ಕ್ರಮೇಣ ಅದಕ್ಕೆ ಉಪನದಿಗಳು ಸೇರಿಕೊಳ್ಳುತ್ತವೆ. ಗುಪ್ತಗಾಮಿನಿಯಾಗಿ ಮತ್ತಾವುದೋ ಸೆಲೆ ಬಂದು ಕೂಡಿಕೊಳ್ಳುತ್ತದೆ, ಹೀಗೆ ತನ್ನನ್ನು ತೆಕ್ಕೆಗೆ ತೆಗೆದುಕೊಂಡು ನದಿ ಹರಿಯುತ್ತದೆ.
ಕಾದಂಬರಿಯೂ ಹಾಗೆಯೆ. ನನ್ನ ಪ್ರಕಾರ ಸಣ್ಣಕತೆಯೆಂದರೆ ಶಿಕಾರಿ, ನಿಗೋಧದಲ್ಲಿ ಹೊಂಚಿ ಕುಳಿತವನು ಸುಳಿವೇ ತಿಳಿಯದೆ ಬರುವ ಮೃಗವನ್ನು ಕೆಡವಿ ಉರುಳಿಸುವುದು. ಕವಿತೆಯೆಂದರೆ ಬೆಸ್ತನ ಹಾಗೆ ಕಾಲದ ಹೊಳೆಗೆ ಗಾಳ ಹಾಕುತ್ತಾ ಕೂರುವುದು.
ಆದರೆ ಕಾದಂಬರಿ ಹಾಗಲ್ಲ. ಅದರ ವಿಸ್ತಾರ ದೊಡ್ಡದು; ಅದು ಒಳಗೊಳ್ಳುವ ಸಂಗತಿಗಳೂ ಕೂಡಾ. ಅದು ಇಡೀ ಮನುಕುಲದ ಕತೆಯೂ ಹೊವ್ದು. ಹೀಗಾಗಿ ಕಾದಂಬರಿಯ ಕರ್ತೃ ಎಲ್ಲವನ್ನೂ ಔದಾರ್ಯದಿಂದ ಮತ್ತು ಅನುಮಾನದಿಂದ ಮತ್ತು ಅನುಮಾನದಿಂದ ನೋಡಬೇಕಾಗುತ್ತದೆ, ಚಂಚಲತೆಯ ಜೊತೆ ತನ್ಮಯತೆಯನ್ನೂ ಗಳಿಸಿಕೊಳ್ಳಬೇಕಾಗುತ್ತದೆ.
ಆದರೆ ಈ ಕಾಲ ಕಷ್ಟದ್ದು. ನಮ್ಮ ಅನುಭವಗಳಲ್ಲಿ ಟೊಳ್ಳೆಷ್ಟು , ನಿಜವೆಷ್ಟು ಅನ್ನುವುದು ನಮಗೆ ಅರಿವಾಗದ ಕಾಲ. ನಮ್ಮನ್ನು ಯಾವ್ಯಾವ ಶಕ್ತಿಗಳೋ ನಿಯನ್ತ್ರಿಸುತ್ತವೆ. ಜಾತಿ, ರಾಜಕಾರಣ ಮತ್ತು ಧರ್ಮ ನಮ್ಮ ಶ್ರದ್ದೆಯನ್ನು ಮೀರಿ ವ್ಯಪಿಸಿದೆ. ಹಳ್ಳಿಗಳು ಕ್ರಮೇಣ ನಗರಗಳಾಗುತ್ತಿವೆ. ಟೀ. ವಿ. ಎಂಬ ಮಾಯೆ ಪ್ರತಿಯಬ್ಬರನ್ನೂ ವಿಶಿಷ್ಟವಾಗಿ ತಬ್ಬಿದೆ. ಎಲ್ಲೋ ಏನೋ ತಪ್ಪಿದೆ ಎಂಬ ಶಂಕೆಯಲ್ಲೇ ಸೃಜನಶೀಲತೆಯನ್ನು ಉಲಿಸಿಕೊಳ್ಳಬೇಕಾಗಿದೆ. ನದಿಯ ನೆನಪಿನ ಹಂಗು ಇಂಥ ಕಷ್ಟಕಾಲದಲ್ಲಿ ಹಿತ್ತಿದ ಕ್ರುತಿ. ಅದರ ಮೂಲಸೆಲೆ ಯಾವುದು ಅನ್ನುವುದು ನನಗೂ ಮರೆತು ಹೊಗಿದೆ. ನದಿಗೆ ನೆನಪುಗಳಿರುವುದಿಲ್ಲ ಅನ್ನುತ್ತಾರೆ. ಯಾಕೆಂದರೆ ಅದು ಎಲ್ಲವನ್ನೂ ತೊಳೆಯುತ್ತಾ ಸಾಗುತ್ತದೆ. ಆದರೆ ನದಿಯ ನೆನಪಿನ ಹಂಗಿನಿಂದ ನೀವ್ಯಾರೂ ಪಾರಾಗಲಾರಿರಿ ಅನ್ನುವುದು ನನಗೆ ಗೊತ್ತಿದೆ. ಇದ್ದ ನದಿಗಿಂತ ಗಾಢವಾಗಿ, ಇರದ ನದಿ ಕಾದುತ್ತದೆ. ನೋಡಿದ ಮುಖಕ್ಕಿಂತ ತೀವ್ರವಾಗಿ ನೋಡದ ಮುಖ ಕಾಡುವ ಹಾಗೆ!